ಹರಿಹರ: ಇಂಧನ ಬೆಲೆ ಏರಿಕೆ ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಶನಿವಾರ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು. ನಗರದ ರಾಣಿ ಚನ್ನಮ್ಮ ವೃತ್ತದಲ್ಲ. ಹರೀಶ್ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕೆಲ ಸಮಯ ರಸ್ತೆ ತಡೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ನಗರದ ಮುಖ್ಯ ರಸ್ತೆಯಲ್ಲಿ ಕೆಲ ಸಮಯ ವಾಹನ ಸಾಲುಗಟ್ಟಿ ನಿಂತ ವಾಹನ ಸವಾರರು ಪ್ರತಿಭಟನೆಯ ಬಿಸಿ ಅನುಭವಿಸಿದರು..ಶಾಸಕ ಬಿ.ಪಿ. ಹರೀಶ್ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದ್ದು ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.