ಜಮ್ಮು-ಕಾಶ್ಮೀರದ ಕುಲ್ಗಾಂನ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಉಗ್ರರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಮಧ್ಯಾಹ್ನ ಸುಮಾರು 2.15ರ ವೇಳೆಗೆ ದಾಳಿಕೋರರು ಸಿಆರ್ಪಿಎಫ್ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಅನಂತ್ನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್ಪಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಜಮ್ಮು, ನವೆಂಬರ್ 11: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಇಂದು (ನವೆಂಬರ್ 11) ಮಧ್ಯಾಹ್ನ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಚೆಕ್ಪೋಸ್ಟ್ ಮೇಲೆ ನಡೆದ ದಾಳಿಯ ವೇಳೆ ಉಗ್ರರು ಗುಂಡಿನ ಮಳೆಗರೆದ ದೃಶ್ಯಗಳು ಹಾಗೂ ಗುಂಡಿನ ಸದ್ದು.