ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬುಧವಾರ (ನ.11) ಬೆಳಗ್ಗೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ತುರ್ತಾಗಿ ದಾಖಲಿಸಲಾಗಿದೆ. ಎಂದಿನಂತೆ ಮುಂಜಾನೆಯ ವಾಕಿಂಗ್ ತೆರಳಿದ್ದ ವೇಳೆ ಅವರು ಹಠಾತ್ತನೆ ಪ್ರಜ್ಞೆತಪ್ಪಿ ನೆಲಕ್ಕೆ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಕಿಂಗ್ ವೇಳೆ ನಡೆದಿದ್ದೇನು?ಬುಧವಾರ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ 75 ವರ್ಷದ ಧನಕರ್ ಅವರಿಗೆ ತಲೆಸುತ್ತು ಬಂದು ಕುಸಿದು ಬಿದ್ದಿದ್ದಾರೆ. ತಕ್ಷಣ ಎಚ್ಚೆತ್ತ ಅವರ ಭದ್ರತಾ ಸಿಬ್ಬಂದಿ, ಪೊಲೀಸ್ ವಾಹನದಲ್ಲಿ ಅವರನ್ನು ನಿವಾಸಕ್ಕೆ ಕರೆತಂದಿದ್ದಾರೆ. ಕೂಡಲೇ ಐಎಲ್ಬಿಎಸ್ (ILBS) ಆಸ್ಪತ್ರೆಯ ವೈದ್ಯಕೀಯ ತಂಡ ಮತ್ತು ಏಮ್ಸ್ನ ಹಿರಿಯ ವೈದ್ಯ ಡಾ.