ಐಪಿಎಲ್ 2026ರ 69ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಈ ನಿರ್ಣಾಯಕ ಗೆಲುವಿನೊಂದಿಗ. ಈ ನಿರ್ಣಾಯಕ ಗೆಲುವಿನೊಂದಿಗೆ ರಾಜಸ್ಥಾನ ರಾಯಲ್ಸ್ ತಮ್ಮ ಅಂತಿಮ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ರಾಜಸ್ಥಾನ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅಂತೆ ರಾಜಸ್ಥಾನ 30 ರನ್ಗಳಿಂದ ಗೆದ್ದು ಬೀಗಿದೆ.ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 205 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ 27 ರನ್ಗಳಿಗೆ ಮತ್ತು ವೈಭವ್ ಸೂರ್ಯವಂಶಿ 4 ರನ್ಗಳಿಗೆ ಔಟಾದರು.