ಐಪಿಎಲ್ 2027 ಹರಾಜಿಗೆ ಮುನ್ನ ಸನ್ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್, ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ನಂತರ ಕಾವ್ಯಾ ಐಪಿಎಲ್ ಹರಾಜಿನಲ್ಲಿ ಸನ್ರೈಸರ್ಸ್ ತಂಡವನ್ನು ಬಲಪಡಿಸಲು ಮರಳಲಿದ್ದಾರೆ. ಕಾವ್ಯಾ ಅವರ ಕುಟುಂಬದ ಸನ್ರೈಸರ್ಸ್ ಕ್ರಿಕೆಟ್ ಸಾಮ್ರಾಜ್ಯ ಐಪಿಎಲ್ ಮಾತ್ರವಲ್ಲದೆ, ಇಂಗ್ಲೆಂಡ್ನ ದಿ ಹಂಡ್ರೆಡ್ ಮತ್ತು ದಕ್ಷಿಣ ಆಫ್ರಿಕಾದ SA20 ಲೀಗ್ಗಳಲ್ಲೂ ತನ್ನ ಹೆಜ್ಜೆ ಗುರುತು ಮೂಡಿಸಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಆಟಗಾರರ ಖರೀದಿ, ಮಾರಾಟ ಹಾಗೂ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಬ್ಯುಸಿಯಾಗಿವೆ. ಈ ನಡುವೆ ಸನ್ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯಾ ಮಾರನ್ ಅವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.