ಕರ್ನಾಟಕ ಸರ್ಕಾರವು 428 ಕಾರ್ಯಕರ್ತರನ್ನು ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಿಸಿದೆ. ಸಿಎಂ ಡಿಕೆ ಶಿವಕುಮಾರ್ ಅನುಮೋದನೆಯೊಂದಿಗೆ ಈ ಅಧಿಕೃತ ಆದೇಶ ಹೊರಬಿದ್ದಿದೆ. ಆ ಮೂಲಕ ಉಪ ಚುನಾವಣೆಗೂ ಮುನ್ನವೇ ಕಾರ್ಯಕರ್ತರಿಗೆ ಅಧಿಕಾರ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ. ಬೆಂಗಳೂರು, ನವೆಂಬರ್ 11: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಉಪಚುನಾವಣೆಗೂ ಮುನ್ನವೇ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಧಿಕಾರಿ ನೀಡುವ ಮೂಲಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.