ಚಿಟಗುಪ್ಪ: ತಾಲೂಕಿನ ಸುಕ್ಷೇತ್ರ ಮೀನಕೇರಾ ಗ್ರಾಮದ ಶ್ರೀ ಗವಿ ವೀರಭದ್ರೇಶ್ವರ ದೇವಸ್ಥಾನದಲ್ಲಿ 72ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಸುಕಿನ ಜಾವ ಅಪಾರ ಭಕ್ತರ ಸಮ್ಮುಖದಲ್ಲಿ ಭಕ್ತಿ. ಗವಿಯ ಪುರಾತನ ದೇವಸ್ಥಾನದ ಆವರಣದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಭಕ್ತರು ಪಾಲ್ಗೊಂಡು ಶ್ರೀ ವೀರಭದ್ರೇಶ್ವರ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳ ಬಳಿಕ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್ ಹಾಗೂ ಸಂತೋಷ ಬೆಲ್ದಾಳೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.ಭಕ್ತರ ಜಯಘೋಷ, ವಾದ್ಯಮೇಳಗಳ ನಾದದ ನಡುವೆ ರಥ ಸಾಗುತ್ತಿದ್ದಂತೆ ಜಾತ್ರಾ ಪರಿಸರದಲ್ಲಿ ಧಾರ್ಮಿಕ ಸಂಭ್ರಮ ಮನೆ ಮಾಡಿತ್ತು.