ಬಸವಕಲ್ಯಾಣ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ನೀ. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಗ್ಯಾರಂಟಿ ಯೋಜನೆಗಳು ಮುಟ್ಟಬೇಕು. ಅರ್ಹರಲ್ಲದವರಿಗೆ ಸರ್ಕಾರದ ಯಾವುದೇ ಯೋಜನೆಗಳ ಸೌಲಭ್ಯ ಹೋಗದಂತೆ ನೋಡಿಕೊಳ್ಳಬೇಕು. ಗ್ಯಾರಂಟಿ ಯೋಜನೆಗಳ ಸದಸ್ಯರು ಸಭೆಯಲ್ಲಿ ತರುವ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರ್ನಿಲಕ್ಷಿಸದೆ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು.