ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಸಫರೆನ್ಸ್ ವ್ಯವಸ್ಥೆಯ ಮೂಲಕ ಚಾಲ್ತಿಯಲ್ಲಿದೆ. ಪ್ರತಿ ಬಾರಿ ದರ್ಶನ್, ಪವಿತ್ರಾ ಸೇರಿದಂತೆ ಎಲ್ಲ ಸ್ಪರ್ಧಿಗಳು ವಿಡಿಯೋ ಕಾನ್ಸಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗುತ್ತಾರೆ. ಅದರಂತೆ ಇಂದೂ ಸಹ ವಿಚಾರಣೆ ವೇಳೆ ದರ್ಶನ್, ಪವಿತ್ರಾ ಸೇರಿದಂತೆ ಇತರೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಮತ್ತು ಪವಿತ್ರಾ ಪರಸ್ಪರ ಮಾತನಾಡಿದ್ದಾರೆ.