ಎನ್ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ಅವರ ವಿವಾದದ ಬೆನ್ನಲ್ಲೇ, ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ದುರೋವ್ ಅವರು ಪ್ರತಿಕ್ರಿಯಿಸಿದ್ದಾರೆ. ಗುಪ್ತಚರ ಸಂಸ್ಥೆಗಳು ಮತ್ತು ಮಹಿಳೆಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಾಸ್ಯಭರಿತ ಪೋಸ್ಟ್ ಹಂಚಿಕೊಂಡಿದ್ದಾರೆ. ಟೆಲಿಗ್ರಾಮ್ ಸಿಇಒ ಅವರ ಹೇಳಿಕೆಗಳಿಗೆ ಆನ್ಲೈನ್ನಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಹಾಗೂ ಚರ್ಚೆಗೆ ಗ್ರಾಸವಾಗಿದೆ. ವಾಷಿಂಗ್ಟನ್, ನವೆಂಬರ್ 12: ಎನ್ವಿಡಿಯ ಸಿಇಒ ಜೆನ್ಸೆನ್ ಹುವಾಂಗ್ ಅವರು ಚೀನೀ ಗೂಢಚಾರಣಿ ಜೊತೆ ಸಂಬಂಧ ಹೊಂದಿದ್ದ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವಿವಿಧ ರೀತಿಯ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.