ರಾಜ್ಯ ಕಾಂಗ್ರೆಸ್ ಸರ್ಕಾರ ಬುಧವಾರ ವಿವಿಧ ನಿಗಮಗಳು ಮತ್ತು ಪ್ರಾಧಿಕಾರಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ಬಿಡುಗಡೆಯಾಗಿರುವ ಮೊದಲ ಪಟ್ಟಿಯಲ್ಲಿ ಚಿತ್ರದುರ್ಗದ ಆರ್ಎಸ್ಎಸ್ ಕಾರ್ಯಕರ್ತ ಹಾಗೂ ಮಾಜಿ ಬಿಜೆಪಿ ನಗರ ಮಂಡಲ ಅಧ್ಯಕ್ಷರ ಹೆಸರಿದ್ದು, ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ ಲಭಿಸಿದೆ. ಚಿತ್ರದುರ್ಗದ, ನವೆಂಬರ್ 12: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಪ್ತ ಎಂದು ಗುರುತಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಮುಖಂಡ ಬಿಡಿ ಭೂಕಾಂತ್ಗೆ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿತ್ತು. ಇದು ಸಾಕಷ್ಟು ವಿವಾದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿತ್ತು.