IMD Weather Forecast: Bay of Bengal Low Bring Heavy Rain Karnataka Other Southern States Soon. ಆಗ್ನೇಯ ಅರೇಬಿಯನ್ ಸಮುದ್ರ ವ್ಯಾಪ್ತಿಯಲ್ಲಿನ ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ದಕ್ಷಿಣ ಭಾರತವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಪಶ್ಚಿಮಕ್ಕೆ ಸಮೀಪಿಸುತ್ತಿರುವ ವಾಯುಭಾರ ಕುಸಿತದಿಂದಾಗಿ ಹಿಮಾಲಯ ಪ್ರದೇಶದಾದ್ಯಂತ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಕಡಿಮೆ ಒತ್ತಡ ಪ್ರದೇಶದಿಂದಾಗಿ ಮುಂದಿನ ವಾರ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.