‘ರಾಮಾಯಣ: ಪಾರ್ಟ್ 1’ ಸಿನಿಮಾದ ಅಬ್ಬರ ನಿಂತಿಲ್ಲ. ಬಿಡುಗಡೆಯಾಗಿ ಒಂದು ವಾರ ಕಳೆದಿದ್ದರೂ ಸಿನಿಮಾದ ಕಲೆಕ್ಷನ್ ತಗ್ಗಿಲ್ಲ. ಕೇವಲ 8 ದಿನಕ್ಕೆ 1000 ಕೋಟಿ ರೂ. ಕ್ಲಬ್ ಸೇರುವ ಮೂಲಕ ಈ ಚಿತ್ರ ಬ್ಲಾಕ್ಬಸ್ಟರ್ ಹಿಟ್ ಎನಿಸಿಕೊಂಡಿದೆ. ಇದರಿಂದಾಗಿ ನಟರಾದ ಯಶ್, ರಣಬೀರ್ ಕಪೂರ್ ಅವರಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ನಿತೇಶ್ ತಿವಾರಿ ನಿರ್ದೇಶನದ, ರಣಬೀರ್ ಕಪೂರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಕ್ಷರಶಃ ಧೂಳೆಬ್ಬಿಸುತ್ತಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೇವಲ ಎಂಟೇ ದಿನಗಳಲ್ಲಿ ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 1000 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.