ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ನಲ್ಲಿಗುಡ್ಡೆ ಕೆರೆ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುತ್ತಿದೆ. ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ವಾಕಿಂಗ್, ಸೈಕ್ಲಿಂಗ್ ಪಾತ್ ಹಾಗೂ ಉದ್ಯಾನವನ ನಿರ್ಮಾಣವಾಗಲಿದೆ. ಈಗಾಗಲೇ ಜಲ ಕ್ರೀಡೆಗಳನ್ನೂ ಆರಂಭಿಸಲಾಗಿದ್ದು, ಈ ರಮಣೀಯ ತಾಣವು ಬೆಂಗಳೂರಿಗರಿಗೆ ಹೊಸ ವಾರಾಂತ್ಯದ ತಾಣವಾಗಿ ರೂಪುಗೊಳ್ಳುತ್ತಿದೆ. ಬೆಂಗಳೂರು, ನವೆಂಬರ್ 12: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದಲ್ಲಿರುವ ನಲ್ಲಿಗುಡ್ಡೆ ಕೆರೆಯು ಪ್ರವಾಸೋದ್ಯಮದ ನೂತನ ಕೇಂದ್ರವಾಗಿ ರೂಪುಗೊಳ್ಳುತ್ತಿದೆ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿರುವ ಈ ಮನಮೋಹಕ ತಾಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ.