ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಅಂತರರಾಜ್ಯ ಜಾಲವನ್ನು ಬಳ್ಳಾರಿ ಪೊಲೀಸರು ಪತ್ತೆಹಚ್ಚಿದ್ದಾರೆ. ಎರಡು ತಿಂಗಳ ಕಾರ್ಯಾಚರಣೆ ನಡೆಸಿದ ಪೊಲೀಸರು 11 ಆರೋಪಿಗಳನ್ನು ಬಂಧಿಸಿ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬಳ್ಳಾರಿ, ಮೈಸೂರು, ಚಿಕ್ಕಮಗಳೂರು ಹಾಗೂ ಆಂಧ್ರಪ್ರದೇಶದಲ್ಲಿ ಜಾಲ ಸಕ್ರಿಯವಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಡಿಆರ್ಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಬಳ್ಳಾರಿ, ನವೆಂಬರ್ 12: ಲಕ್ಷ್ಮೀ ಪೂಜೆ ಮಾಡಿದರೆ ಹಣದ ಮಳೆಯೇ ಸುರಿಯುತ್ತದೆ ಎಂದು ಯುವತಿಯರನ್ನು ನಂಬಿಸಿ, ಅವರನ್ನು ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರ ಮಾರಾಟಕ್ಕೆ ಬಳಸಿಕೊಳ್ಳುತ್ತಿದ್ದ ಅಂತರರಾಜ್ಯ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ.