ಮತದಾರರ ಹೆಸರು ಡಿಲೀಟ್, ಟಿವಿಕೆಗೆ ಗೆಲುವು; ತಮಿಳುನಾಡು ಚುನಾವಣೆಯ ಅಂಕಿ-ಅಂಶ ಏನು ಹೇಳುತ್ತೆ. ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಫಲಿತಾಂಶದ ಬಳಿಕ Special Intensive Revision (SIR) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಿರುವುದು ತಮ್ಮ ಪಕ್ಷದ ಸೋಲಿಗೆ ಕಾರಣವಾದ ಅಂಶಗಳಲ್ಲಿ ಒಂದಾಗಿದೆ ಎಂದು ಇತ್ತೀಚೆಗೆ ಹೇಳಿದ್ದಾರೆ.