2030ರ ವೇಳೆಗೆ ಕರ್ನಾಟಕದಲ್ಲಿ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ಇನ್ವೆಸ್ಟ್ ಕರ್ನಾಟಕ ಪೂರ್ವಭಾವಿ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ. ಕಳೆದ ವರ್ಷ ರಾಜ್ಯದ ಆರ್ಥಿಕತೆ ಶೇ. 8ರಷ್ಟು ಬೆಳವಣಿಗೆ ಕಂಡಿದೆ ಎಂದ ಅವರು, ದೇಶದಲ್ಲೇ ಅತಿ ಹೆಚ್ಚು ಅಂದರೆ 1,100ಕ್ಕೂ ಅಧಿಕ ಗ್ಲೋಬಲ್ ಕೆಪಬಿಲಿಟಿ ಸೆಂಟರ್ಗಳಿಗೆ (GCC) ಕರ್ನಾಟಕ ನೆಲೆಯಾಗಿದೆ ಎಂದಿದ್ದಾರೆ.