ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ತೀವ್ರ ಸಿಬ್ಬಂದಿ ಕೊರತೆ ಎದುರಾಗಿದೆ. ಕೇವಲ ಓರ್ವ ವೈದ್ಯರಿಂದ 10 ಹಳ್ಳಿಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಲ್ಯಾಬ್ ಟೆಕ್ನಿಷಿಯನ್, ಡಿ-ಗ್ರೂಪ್ ಸಿಬ್ಬಂದಿ, ಸಹಾಯಕರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್, ಆರೋಗ್ಯ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ, ಸಿಬ್ಬಂದಿ ನಿಯೋಜನೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ಗೆ ಮನವಿ ಸಲ್ಲಿಸಿದ್ದಾರೆ. ನೆಲಮಂಗಲ, ನವೆಂಬರ್ 13: ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಡಾ. ಲೀಲಾವತಿ ಅವರ ಹೆಸರಿನಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರವು ತೀವ್ರ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದು, ಆರೋಗ್ಯಾಧಿಕಾರಿಗಳ ನಡೆಗೆ ನಟ ವಿನೋದ್ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಟಿ ಡಾ.ಎಂ.