ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಶಿಕ್ಷಣ ಸುಧಾರಣೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಸಮವಸ್ತ್ರ ನೀಡುವುದು, 1,574 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಎಸ್ಸಿ/ಎಸ್ಟಿ ಸಮಾವೇಶ ಆಯೋಜನೆ ಮತ್ತು ವಿವಿಧ ಸಮುದಾಯಗಳೊಂದಿಗೆ ಸಭೆ ನಡೆಸುವ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಪ್ರಾಥಮಿಕ ಶಿಕ್ಷಣ ತಮ್ಮ ಆದ್ಯತೆಯ ವಿಷಯ ಎಂದಿದ್ದಾರೆ. ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ಉತ್ತಮ ಸೌಲಭ್ಯಗಳನ್ನು ಹೊಂದಿರಬೇಕು ಎಂದು ಪ್ರತಿಪಾದಿಸಿದ್ದಾರೆ. ಹಾಸ್ಟೆಲ್ ಮತ್ತು ಶಾಲಾ ಮಕ್ಕಳಿಗೆ ಹೊಸ ಚಿಂತನೆ ಮತ್ತು ವಿನ್ಯಾಸದ ಸಮವಸ್ತ್ರ ನೀಡುವ ಬಗ್ಗೆ ಶಿಕ್ಷಣ ಇಲಾಖೆಗೆ ಸಲಹೆ ನೀಡಲಾಗಿದೆ.