ಬೆಂಗಳೂರಿನಲ್ಲಿ ಎಐ ತಂತ್ರಜ್ಞಾನದ ಮೂಲಕ ಪತ್ತೆಯಾದ 45 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಪತ್ತೆಯಾಗಿದ್ದು, ಇವುಗಳನ್ನು ತ್ವರಿತವಾಗಿ ಮುಚ್ಚುವಂತೆ ಪಾಲಿಕೆಗಳಿಗೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಈ ತಿಂಗಳ ಅಂತ್ಯದೊಳಗೆ ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಯೋಜನೆ ರೂಪಿಸಲಾಗಿದೆ. ಇನ್ನು ರಸ್ತೆ ಅಗೆದು ಗುಂಡಿ ಸೃಷ್ಟಿಸುವುದಕ್ಕೂ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ. ಬೆಂಗಳೂರು, ನವೆಂಬರ್ 12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳದ್ದೇ ಸಾಮ್ರಾಜ್ಯವಾಗಿದ್ದು, ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆ ರಸ್ತೆಗಳಿವೆಯೋ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದ್ದರೆ, ಮತ್ತೊಂದೆಡೆ ಹೊಸದಾಗಿ ಗುಂಡಿಗಳು ಸೃಷ್ಟಿಯಾಗುತ್ತಿವೆ.