ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ದಾವಣಗೆರೆಯಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನವೆಂಬರ್ 13 ಮತ್ತು 14ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಹಾಗೂ ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ನವೆಂಬರ್ 13: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಕಂಡುಬರುತ್ತಿದೆ. ರಾಜ್ಯದ ಬಯಲು ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಅತಿ ಕಡಿಮೆ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.