'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದೆ ಉಡುಪಿಯಲ್ಲಿ ಪೋಷಕರ ವಿವಾಹ ವಾರ್ಷಿಕೋತ್ಸವದ ವೇಳೆ ಮಾತ್ರ ಅಭಿಮಾನಿಗಳಿಗೆ ದರ್ಶನ ನೀಡಿದ್ದ ಅವರು, ಬಳಿಕ ಮತ್ತೆ ನಾಪತ್ತೆಯಾಗಿದ್ದಾರೆ. ಹೀಗಾಗಿ "ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ? 'ರಿಚರ್ಡ್ ಆಂಟನಿ' ಯಾವ ಹಂತದಲ್ಲಿದೆ?" ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಹೆಚ್ಚಾಗಿವೆ. ಈ ಕುತೂಹಲಕ್ಕೆ ಈಗ ನಿರ್ದೇಶಕ ಹೇಮಂತ್ ರಾವ್ ಪರೋಕ್ಷವಾಗಿ ಉತ್ತರ ನೀಡಿದ್ದಾರೆ. ಹೌದು!