ಝಾಕಿರ್ ನಾಯಕ್ ಸ್ಥಾಪಿತ ಐಆರ್ಎಫ್ ಸಂಘಟನೆ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ 5 ವರ್ಷ ವಿಸ್ತರಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿ ಈ ಕ್ರಮ ಕೈಗೊಳ್ಳಲಾಗಿದೆ. ಸಂಘಟನೆ ಧಾರ್ಮಿಕ ದ್ವೇಷ ಪ್ರಚೋದಿಸುತ್ತದೆ, ರಾಷ್ಟ್ರೀಯ ಭದ್ರತೆಗೆ ಅಪಾಯ ತರುತ್ತದೆ ಎಂಬುದು ಸರ್ಕಾರದ ಆರೋಪ. ಕೋಮು ಸೌಹಾರ್ದತೆ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನವದೆಹಲಿ, ನವೆಂಬರ್ 13: ವಿವಾದಾತ್ಮಕ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯಕ್ ಸ್ಥಾಪಿಸಿರುವ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (IRF) ಸಂಘಟನೆಯ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳ ಕಾಲ ವಿಸ್ತರಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.