ಬೆಂಗಳೂರಿನ ಸದ್ದುಗುಂಟೆ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ (Pink Line) ಚಾಲನೆ ನೀಡಿದ್ದಾರೆ. ಈ ಮೂಲಕ ನಮ್ಮ ಮೆಟ್ರೋ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲವಾಗಿ ಹೊರಹೊಮ್ಮಿದೆ. ನೂತನ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿದ ಬಳಿಕ ಐಐಎಂಬಿ-ಬಿಳೇಕಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಪ್ರಧಾನಿ ಮೆಟ್ರೋದಲ್ಲಿ ಸಂಚರಿಸಿದ್ದು, ಮೋದಿಗೆ ಈ ವೇಳೆ ಹಲವರು ಸಾಥ್ ನೀಡಿದ್ದಾರೆ. ಬೆಂಗಳೂರು, ನವೆಂಬರ್ 13: ಸದ್ದುಗುಂಟೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆ ಮೂಲಕ ದೇಶದ ಎರಡನೇ ಅತೀ ದೊಡ್ಡ ಮೆಟ್ರೋ ಜಾಲವಾಗಿ ನಮ್ಮ ಮೆಟ್ರೋ ಹೊರಹೊಮ್ಮಿದೆ.