ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಕಾಳೇನ ಅಗ್ರಹಾರದಿಂದ ತಾವರೆಕೆರೆ (ಎಸ್.ಜಿ. ಪಾಳ್ಯ) ವರೆಗಿನ 7.5 ಕಿ.ಮೀ. ಉದ್ದದ ‘ನಮ್ಮ ಮೆಟ್ರೋ’ ಪಿಂಕ್ ಲೈನ್ ಎಲಿವೇಟೆಡ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಮೂಲಕ ಬೆಂಗಳೂರು ಮೆಟ್ರೋ ಜಾಲ 103.6 ಕಿ.ಮೀ. ತಲುಪಿದ್ದು, ಮುಂಬೈಯನ್ನು ಹಿಂದಿಕ್ಕಿ ದೆಹಲಿ ಬಳಿಕ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮಾರ್ಗ, ನಿಲ್ದಾಣಗಳು ಮತ್ತು ಉದ್ಘಾಟನೆಯ ಸಂಪೂರ್ಣ ವಿವರ ಇಲ್ಲಿದೆ.