ಬೆಂಗಳೂರಿನ ಯಲಹಂಕ ನ್ಯೂಟೌನ್ನಲ್ಲಿ ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ ಅವರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಚೇರಿಗೆ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು, ಪತ್ನಿಯ ಕಣ್ಣೆದುರೇ ಚರಣ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆಂಗಳೂರು, ನವೆಂಬರ್ 13: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ನಲ್ಲಿ ನಡೆದಿದೆ. ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ (35) ಕೊಲೆಯಾದ ಉದ್ಯಮಿ. ಕಚೇರಿಗೆ ಬರುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚರಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.