ಮೌಂಟ್ ಮೌಂಗನುಯಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಮೊದಲ ಓವರ್ನಲ್ಲೇ ಆಘಾತ ಎದುರಾಗಿದೆ. ಮ್ಯಾಟ್ ಹೆನ್ರಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಇಂತಹ ಘಟನೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಬಾರಿ ನಡೆದಿದ್ದು, ಭಾರತದ ಬ್ಯಾಟಿಂಗ್ಗೆ ಭಾರಿ ಹಿನ್ನಡೆ ಉಂಟಾಗಿದೆ. ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ಶುಕ್ರವಾರ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 334 ರನ್ಗಳ ಬೃಹತ್ ಗುರಿ ನಿಗದಿಪಡಿಸಿತು. ಈ ಗುರ ಬೆನ್ನಟ್ಟಿದ ಭಾರತಕ್ಕೆ ಮೊದಲ ಓವರ್ನಲ್ಲೇ ಆಘಾತ ಎದುರಾಗಿದೆ.