ನಾರಿನಂಶ ಹೆಚ್ಚಿರುವ ಆಹಾರ ಸೇವಿಸುತ್ತಿದ್ದರೂ, ಸಾಕಷ್ಟು ನೀರು ಕುಡಿಯುತ್ತಿದ್ದರೂ ಮಲಬದ್ಧತೆ ಸಮಸ್ಯೆ ಕಾಡುತ್ತಿದೆಯೇ? ಹಾಗಾದರೆ ನಿಮ್ಮ ಮಾನಸಿಕ ಒತ್ತಡವೂ ಇದಕ್ಕೆ ಕಾರಣವಾಗಿರಬಹುದು. ದೀರ್ಘಕಾಲದ ಒತ್ತಡವು ನರಮಂಡಲ ಮತ್ತು ಕರುಳಿನ ಸಹಜ ಚಲನೆಯ ಮೇಲೆ ಪರಿಣಾಮ ಬೀರಬಹುದು. ಒತ್ತಡ ಕಡಿಮೆ ಮಾಡಿಕೊಳ್ಳಲು ಯೋಗ, ವ್ಯಾಯಾಮ, ಉತ್ತಮ ನಿದ್ರೆ ಮತ್ತು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಅಗತ್ಯ ಎಂದು ತಜ್ಞರು ಸಲಹೆ ನೀಡುತ್ತಾರೆ. ಮಲಬದ್ಧತೆ (Constipation) ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಹೊಟ್ಟೆ ಸರಿಯಾಗಿ ಖಾಲಿಯಾಗದಿರುವುದು, ಹೊಟ್ಟೆ ಉಬ್ಬರ, ಭಾರವಾದ ಅನುಭವ, ಸೆಳೆತ ಮತ್ತು ವಾಕರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು.