ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಅಭಿನಯದ ‘ರಾಮಾಯಣ’ ಸಿನಿಮಾ ಬಗ್ಗೆ ಭಾರಿ ಕುತೂಹಲ ಮೂಡಿಸಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ದೊಡ್ಡ ಪರದೆಯ ಮೇಲೆ ಈ ಚಿತ್ರವನ್ನು ವೀಕ್ಷಿಸಲು ಪ. ಚಿತ್ರತಂಡ ನಿನ್ನೆ ಹೈದರಾಬಾದ್ನಲ್ಲಿ ಅದ್ಧೂರಿಯಾಗಿ ಆಯೋಜಿಸಿದ್ದ ಬಿಡುಗಡೆ ಪೂರ್ವ ಕಾರ್ಯಕ್ರಮವೂ ಅಪಾರ ಜನರ ಭಾಗವಹಿಸುವಿಕೆಯಿಂದ ಯಶಸ್ವಿಯಾಯಿತು. ಚಿತ್ರ ವಿಶ್ವಾದ್ಯಂತ ನವೆಂಬರ್ 5ರಂದು ತೆರೆಗೆ ಬರಲಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ಮಾಪಕ ನಮಿತ್ ಮಲ್ಹೋತ್ರಾ, ಚಿತ್ರದ ಪ್ರಚಾರಕ್ಕೆ ಪ್ರೇಕ್ಷಕರು ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು. ಈ ಚಿತ್ರ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುವಂತೆ ಮೂಡಿಬರಲಿದೆ ಎಂದು ಭರವಸೆ ನೀಡಿದರು.