ಚಿಕ್ಕಬಳ್ಳಾಪುರದಲ್ಲಿ 24 ಎಕರೆ ಸರ್ಕಾರಿ ಕೆರೆ ಜಾಗದ ಇ-ಖಾತೆ ಸೃಷ್ಟಿಸಿ ಪರಭಾರೆ ಮಾಡಿದ ಪ್ರಕರಣದ ಬಗ್ಗೆ ಸಚಿವ ಭೈರತಿ ಸುರೇಶ್ ಕೆಡಿಪಿ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಪ್ರಭು ಮತ್ತು ನಗರಸಭೆ ಆಯುಕ್ತ ಮನ್ಸೂರ್ ಅಲಿ ವಿರುದ್ಧ ಕಿಡಿ ಕಾರಿದ ಸಚಿವರು, ಅಧಿಕಾರಿಗಳ ನಿಷ್ಕ್ರಿಯತೆ ಹಾಗೂ ಸಾರ್ವಜನಿಕರಿಗೆ ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ, ನವೆಂಬರ್ 13: ನಗರದಲ್ಲಿ 24 ಎಕರೆ ಸರ್ಕಾರಿ ಕೆರೆಗೆ ಇ-ಖಾತೆ ಸೃಷ್ಟಿಸಿ ಪರಭಾರೆ ಮಾಡಿರುವ ವಿಚಾರ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.