ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲ ಕ್ರೀಡಾ ಕೇಂದ್ರದಲ್ಲಿ ಬೋಟ್ ದುರಂತ ಸಂಭವಿಸಿದೆ. ಪ್ರವಾಸಕ್ಕೆ ಬಂದಿದ್ದ ಗುಜರಾತ್ ಮೂಲದ ದಂಪತಿ ಬೋಟ್ ಪಲ್ಟಿಯಾಗಿ ಸಾವನ್ನಪ್ಪಿದ್ದು, ಅವರ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕೊಡಗು, ನವೆಂಬರ್ 13: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಕ್ರೀಡಾ ಕೇಂದ್ರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರಿದ್ದ ಬೋಟ್ ಪಲ್ಟಿಯಾಗಿ ಗುಜರಾತ್ ಮೂಲದ ದಂಪತಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಕುಟುಂಬ ಹಿನ್ನೀರಿನಲ್ಲಿ ಬೋಟ್ನಲ್ಲಿ ವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಗುಜರಾತ್ ಮೂಲದ ದಂಪತಿ ಸೇರಿದಂತೆ ಇಬ್ಬರು ಮಕ್ಕಳು ಪ್ರವಾಸಕ್ಕೆ ಬಂದಿದ್ದಾರೆ.