ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದು ಇ-ಕೆವೈಸಿ ಪ್ರಕ್ರಿಯೆಗೆ ಪಡಿತರ ಚೀಟಿದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಪರವಾನಿಗೆಯನ್ನು ಅಮಾನತುಗೊಳಿಸಲಾಗಿದೆ. ವಿಡಿಯೋ ವೈರಲ್ ಆಗಿದ್ದು, ತನಿಖೆ ನಂತರ ಆರೋಪ ದೃಢಪಟ್ಟಿದೆ. ಸಂಬಂಧಿತ ಆಹಾರ ನಿರೀಕ್ಷಕರಿಗೂ ನೋಟಿಸ್ ನೀಡಲಾಗಿದ್ದು, ಸಚಿವರು ಇಂತಹ ದುರ್ನಡತೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶಿಸಿದ್ದಾರೆ. ಬೆಂಗಳೂರು, ನವೆಂಬರ್ 13: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆ ಬೆಂಗಳೂರಿನ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಮಾನತುಗೊಳಿಸಿದೆ. ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೋಳೂರು ಪಾಳ್ಯ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಂದ ಹಣ ಕೇಳಿದ್ದರು ಎನ್ನಲಾಗಿದೆ.