ಕರ್ನಾಟಕ ಹವಾಮಾನ ಮುನ್ಸೂಚನೆ: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ರಾಜ್ಯದ ಬಯಲು ಪ್ರದೇಶಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಮತ್ತು ಶಿವಮೊಗ್ಗದಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು, ನವೆಂಬರ್ 14: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.