ಗುವಾಹಟಿ: ಸಾರ್ವಜನಿಕ ಸ್ಥಳಗಳು ಹಾಗೂ ಟ್ರಾಫಿಕ್ ಸಿಗ್ನಲ್ಗಳಲ್ಲಿ ಹಣಕ್ಕಾಗಿ ಒತ್ತಾಯಿಸಿ ಸುಲಿಗೆ, ಬೆದರಿಕೆ ಮತ್ತು ಅಸಭ್ಯ ವರ್ತನೆ ತೋರಿದ ಆರೋಪದಡಿ ಅಸ್ಸಾಂನ ಗುವಾಹಟಿ ಪೊಲೀಸರು ಬೃಹತ್ ಕಾರ್ಯಾ. ನಗರದ ಪ್ರಮುಖ ಜಂಕ್ಷನ್ಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಸಾರ್ವಜನಿಕರಿಗೆ ತೀವ್ರ ಕಿರುಕುಳ ನೀಡಲಾಗುತ್ತಿದೆ ಎಂಬ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಖಾಕಿ ಪಡೆ ಈ ದಿಟ್ಟ ಕ್ರಮ ಕೈಗೊಂಡಿದೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುವಾಹಟಿ ಜಂಟಿ ಪೊಲೀಸ್ ಆಯುಕ್ತ ಅಂಕುರ್ ಜೈನ್, ನಗರದ ಮೂರು ಪೊಲೀಸ್ ಜಿಲ್ಲೆಗಳ ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಿ ಈ ಸಂಘಟಿತ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.