ಬೀದರ್: ರಾಜ್ಯ ಸರ್ಕಾರದಿಂದ ಕೊಡಲಾಗುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರೂ ಆದ ಹಾಲಿ ನಿರ್ದೇಶಕ ಮಲ್ಲಿಕಾರ್ಜುನ. ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಸಹಕಾರ ಕ್ಷೇತ್ರಕ್ಕೆ ನೀಡಿದ ನಾಲ್ಕು ದಶಕಗಳ ಗಣನೀಯ ಕೊಡುಗೆಗಾಗಿ ಬಿರಾದಾರ ಅವರಿಗೆ ಪ್ರಶಸ್ತಿ ಒಲಿದಿದೆ.ಕಲ್ಯಾಣ ಕರ್ನಾಟಕದಲ್ಲಿ ಸಹಕಾರ ಚಳವಳಿಗೆ ಶಕ್ತಿ ತುಂಬಿದ ಮುಂಚೂಣಿ ನಾಯಕರಲ್ಲಿ ಬಿರಾದಾರ ಕೂಡ ಒಬ್ಬರು. ಅವರು ಸಹಕಾರ ಕ್ಷೇತ್ರದ ಮೂಲಕ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಬಿರಾದಾರ ಅವರು ಒಮ್ಮೆ ರಾಜ್ಯ ಸರ್ಕಾರದ ನಾಮ ನಿರ್ದೇಶನ ಸೇರಿದಂತೆ ಸತತ ಐದನೇ ಬಾರಿಗೆ ಕಲಬುರಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕರಾಗಿದ್ದಾರೆ.