ಜಿಲ್ಲೆಯ 154 ಹಾಸ್ಟೆಲ್ಗಳಲ್ಲಿ ಪರಿಶೀಲನೆ ನಡೆಸಿದಾಗ 48 ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಅಭಾವ ಇರುವುದು ಕಂಡುಬಂದಿದೆ. ಈ ಪೈಕಿ 44 ಹಾಸ್ಟೆಲ್ಗಳಿಗೆ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ತಾಲೂಕುವಾರು ಅಂಕಿಅಂಶಗಳ ಪ್ರಕಾರ ಚಿಂತಾಮಣಿ ತಾಲೂಕಿನಲ್ಲಿ 23 ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 11 ಹಾಸ್ಟೆಲ್ಗಳು ನೀರಿನ ಸಮಸ್ಯೆಯಿಂದ ಹೆಚ್ಚು ಬಾಧಿತವಾಗಿವೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಹಾಸ್ಟೆಲ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ, ಮುಂದಿನ 10 ದಿನಗಳೊಳಗೆ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.