ಮೈಸೂರು ಭೇಟಿಯ ವೇಳೆ ಜನರಿಂದ ದೊರೆತ ಆತ್ಮೀಯ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಕಾಸ್ಮೋಸ್ ತಾರಾಲಯ ಉದ್ಘಾಟನೆ ಸೇರಿದಂತೆ ಮೈಸೂರು ಪ್ರವಾಸದ ವಿವಿಧ ಕ್ಷಣಗಳನ್ನು ಒಟ್ಟುಗೂಡಿಸಿದ ವಿಡಿಯೋವನ್ನು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹಂಚಿಕೊಂಡಿರುವ ಮೋದಿ, ಸಾಂಸ್ಕೃತಿಕ ನಗರಿಯಲ್ಲಿ ಸಿಕ್ಕ ಭವ್ಯ ಸ್ವಾಗತಕ್ಕೆ ಧನ್ಯವಾದ ಹೇಳಿದ್ದಾರೆ. ಮೈಸೂರು, ನವೆಂಬರ್ 14: ಮೈಸೂರು ಭೇಟಿಯ ಸಂದರ್ಭದಲ್ಲಿನ ಆತ್ಮೀಯ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮೈಸೂರು ಪ್ರವಾಸದ ವಿವಿಧ ವಿಡಿಯೋ ತುಣುಕುಗಳನ್ನು ಒಟ್ಟುಗೂಡಿಸಿ ವಿಶೇಷ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ನಗರದ ಜನರು ಅಪಾರ ಉತ್ಸಾಹ ಮತ್ತು ಪ್ರೀತಿಯಿಂದ ಸ್ವಾಗತಿಸಿದರು ಎಂದು ಬಣ್ಣಿಸಿದ್ದಾರೆ.