ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 19 ರಿಂದ ಡಿಸೆಂಬರ್ 1, 2026 ರವರೆಗೆ ನ್ಯೂಝಿಲೆಂಡ್ನಲ್ಲಿ ನಡೆಯಲಿದೆ. ಸರಣಿಯ ಮೊದಲ ಪಂದ್ಯವು ನವೆಂಬರ್ 19 ರಿಂದ 23 ರವರೆಗೆ ವೆಲ್ಲಿಂಗ್ಟನ್ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನಡೆಯಲಿದ್ದು, ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಕ್ರೀಡಾಂಗಣದಲ್ಲಿ ಜರುಗಲಿದೆ.