ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮ್ಮುಖದಲ್ಲೇ ಮೇಕೆದಾಟು ಯೋಜನೆಗೆ ಕೇಂದ್ರದ ಅಂತಿಮ ಅನುಮತಿ ನೀಡುವಂತೆ ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಕ್ಕೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಣಿಕಂ ಟ್ಯಾಗೋರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಇದೀಗ ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ VS ಕಾಂಗ್ರೆಸ್ ಚರ್ಚೆ ಮುನ್ನೆಲೆಗೆ ಬಂದಿದೆ. ಚೆನ್ನೈ, ನವೆಂಬರ್ 14: ಮೇಕೆದಾಟು ಜಲಾಶಯ ಯೋಜನೆಗೆ ಕೇಂದ್ರ ಸರ್ಕಾರ ಅಂತಿಮ ಅನುಮತಿ ನೀಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಮಾಡಿದ ಆಗ್ರಹಕ್ಕೆ ಇದೀಗ ತಮಿಳುನಾಡು ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.