ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಕುಸಿಯುತ್ತಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ 70.93 ಅಡಿಗೆ ಇಳಿಕೆಯಾಗಿದ್ದು, ಕಳೆದ ವರ್ಷಕ್ಕಿಂತ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ. ಕೆಆರ್ಎಸ್, ತುಂಗಭದ್ರಾ, ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ? ಬೆಂಗಳೂರಿನ ಕುಡಿಯುವ ನೀರಿನ ಪೂರೈಕೆಯ ಮೇಲೆ ಇದರ ಪರಿಣಾಮ ಏನು? ಸಂಪೂರ್ಣ ವರದಿ ಇಲ್ಲಿದೆ. ಬೆಂಗಳೂರು, ನವೆಂಬರ್ 14: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ನಿಧಾನವಾಗಿ ಕುಸಿಯುತ್ತಿದೆ. ಅದರಲ್ಲೂ ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕ ಮೂಡಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 17.