ಗಾಂಧಿ ಕುಟುಂಬದ ಸದಸ್ಯರ ಸಾವು ಮತ್ತು ಸೋನಿಯಾ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಶಿಮ್ಲಾದಲ್ಲಿ ಎಫ್ಐಆರ್ ದಾಖಲಾಗಿದೆ. ನಿವೃತ್ತ ಕ್ಯಾಪ್ಟನ್ ಅತುಲ್ ಶರ್ಮಾ ನೀಡಿದ ದೂರಿನ ಮೇರೆಗೆ ಹಿಮಾಚಲ ಪ್ರದೇಶ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸೋನಿಯಾ ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದ ಮೇಲೆ ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಮಾಚಲ ಪ್ರದೇಶ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಿವೃತ್ತ ಕ್ಯಾಪ್ಟನ್ ಅತುಲ್ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.