ರಾಜ್ಯದಲ್ಲಿ ₹1 ಕೋಟಿವರೆಗಿನ ವಂಚನೆ ಪ್ರಕರಣಗಳಿಗೆ ಪಿಎಸ್ಐ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಪ್ರಕರಣಗಳಿಗೆ ಇನ್ಸ್ಪೆಕ್ಟರ್ ತನಿಖೆ ನಡೆಸಲು ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಬಿಎನ್ಎಸ್ಎಸ್ ಸೆಕ್ಷನ್ 30ರ ಅಡಿಯಲ್ಲಿ ಹೊರಡಿಸಲಾಗಿರುವ ಈ ಸುತ್ತೋಲೆಯ ಪ್ರಕಾರ, ಆರ್ಥಿಕ ಅಪರಾಧಗಳ ಮೊತ್ತದ ಆಧಾರದ ಮೇಲೆ ತನಿಖಾಧಿಕಾರಿಗಳ ಅಧಿಕಾರವನ್ನು ನೀಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಬೆಂಗಳೂರು, ನ.14: ರಾಜ್ಯದಲ್ಲಿ ವಂಚನೆ , ದುರ್ಬಳಕೆ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳ ತನಿಖೆಯನ್ನು ಯಾವ ದರ್ಜೆಯ ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂಬ ಬಗ್ಗೆಯಿರುವ ಗೊಂದಲಗಳನ್ನು ನಿವಾರಿಸಲು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.