ದೊಡ್ಡ ಕುರುಬರಹಳ್ಳಿ ದೇವಸ್ಥಾನ ಪ್ರವೇಶಕ್ಕೆ ತಮ್ಮನ್ನು ತಡೆಯಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವರು ದೇವಸ್ಥಾನದ ಬಾಗಿಲು ಹಾಕಿ ಕೀ ಇಟ್ಟುಕೊಂಡು ತಡೆದಿದ್ದಾರೆ ಎಂದ ಅವರು, ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟಾಗಿದೆ ಎಂದರು. ಸ್ಥಳೀಯ ಶಾಸಕರು ಮತ್ತು ಪೊಲೀಸರ ಮೌನದ ಬಗ್ಗೆಯೂ ನಿಖಿಲ್ ಪ್ರಶ್ನಿಸಿದ್ದಾರೆ. ರಾಮನಗರ, ನ.14: ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ನಿರ್ಬಂಧ ಹೇರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ.