ಹಲವಾರು ತೆಲುಗು ಸಿನಿಮಾಗಳಲ್ಲಿ ನಾಯಕ, ಪೋಷಕ ಪಾತ್ರ, ವಿಲನ್, ಹಾಸ್ಯ ಪಾತ್ರಗಳಲ್ಲಿ ನಟನೆ ಮಾಡಿದ್ದ ಹಿರಿಯ ನಟ ಗಿರಿ ಬಾಬು ಇಂದು (ನವೆಂಬರ್ 14) ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ಸಮಯದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಅವರು ಕೊನೆ ಉಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯಿಂದ ತೆಲುಗು ಚಲನಚಿತ್ರರಂಗದಲ್ಲಿ ತೀವ್ರ ವಿಷಾದ ಮೂಡಿದೆ.