ನಿಗಮ ಮಂಡಳಿಗಳಿಗೆ ಆರ್ಎಸ್ಎಸ್ ಕಾರ್ಯಕರ್ತರ ನೇಮಕದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಆರ್ಎಸ್ಎಸ್ ಹಿನ್ನೆಲೆಯಿರುವವರನ್ನು ತನಿಖೆ ಮಾಡುತ್ತಿದ್ದು, ಅವರನ್ನು ತಕ್ಷಣವೇ ರಾಜೀನಾಮೆ ನೀಡುವಂತೆ ಅಥವಾ ಸರ್ಕಾರ ಅವರನ್ನು ಹಿಂದಕ್ಕೆ ಪಡೆಯುವಂತೆ ನಿರ್ದೇಶನ ನೀಡಿರುವುದಾಗಿ ಹರಿಪ್ರಸಾದ್ ತಿಳಿಸಿದ್ದಾರೆ. ಇದೀಗ ಈ ಹೇಳಿಕೆ ಕಾಂಗ್ರೆಸ್ನಲ್ಲೇ ಭಾರೀ ಚರ್ಚೆ ಕಾರಣವಾಗಿದೆ. ಬೆಂಗಳೂರು, ನ.14: ನಿಗಮ ಮಂಡಳಿಗೆ ಆರ್ಎಸ್ಎಸ್ ಕಾರ್ಯಕರ್ತರ ನೇಮಕದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ನೇಮಕಾತಿಗಳು ಕೆಲವೆಡೆ ಅಚಾತುರ್ಯದಿಂದ ಆಗಿರಬಹುದು ಎಂದು ಹೇಳಿದ ಹರಿಪ್ರಸಾದ್, ಇದನ್ನು ಸರಿಪಡಿಸುವುದಾಗಿ ತಿಳಿಸಿದ್ದಾರೆ. ಆರ್ಎಸ್ಎಸ್ ಹಿನ್ನೆಲೆ ಹೊಂದಿರುವವರನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ.