ರಾಹುಲ್ ಗಾಂಧಿ ಭಾರತ್ ಶೃಂಗಸಭೆಯಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2014ರಲ್ಲೇ ಭಾರತದಲ್ಲಿ ಪ್ರಜಾಪ್ರಭುತ್ವ ನಾಶವಾಯಿತು, ಚುನಾವಣಾ ವ್ಯವಸ್ಥೆ ದುರ್ಬಲಗೊಂಡಿದೆ ಎಂದರು. ಹೈದರಾಬಾದ್, ನವೆಂಬರ್ 14: ಹೈದರಾಬಾದ್ನಲ್ಲಿ ನಡೆದ ಭಾರತ್ ಶೃಂಗಸಭೆ 2026ರಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. 2014ರಲ್ಲಿ ಭಾರತದಲ್ಲಿ ಪ್ರಜಾಪ್ರಭುತ್ವ ನಾಶವಾಯಿತು ಎಂದು ಆರೋಪಿಸಿದ ಅವರು, ದೇಶದ ಚುನಾವಣಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳು ದುರ್ಬಲವಾಗಿವೆ ಎಂದು ಹೇಳಿದ್ದಾರೆ. ಫ್ಯಾಸಿಸ್ಟ್ ಶಕ್ತಿಗಳು ಜನರ ಮಾತು ಕೇಳುವುದಿಲ್ಲ, ಬದಲಿಗೆ ಕೂಗಾಡುವ ಮೂಲಕ ತಮ್ಮ ಪ್ರಭಾವ ತೋರಿಸುತ್ತವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.