ನವದೆಹಲಿ: ಗ್ರಾಹಕರು ಬಟ್ಟೆಗಳನ್ನು ಖರೀದಿಸಲು ಬರುವ ಶೋರೂಂ ಒಂದರಲ್ಲಿ ಮಹಿಳಾ ಉದ್ಯೋಗಿಯೊಬ್ಬರ ಬರ್ಬರ ಹತ್ಯೆ ನಡೆದಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆತಂಕ ಮೂಡಿಸಿದೆ. ಕೆಲಸ ಮಾಡುತ್ತಿ. ಕೆಲಸ ಮಾಡುತ್ತಿದ್ದ ಬಟ್ಟೆ ಅಂಗಡಿಯ ಚೇಂಜಿಂಗ್ ರೂಮ್ನಲ್ಲೇ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಕೃತ್ಯ ಎಸಗಿದ ಆರೋಪಿ ಪರಾರಿಯಾಗಿದ್ದಾನೆ. ಮಹಿಳೆ ತನ್ನ ಪ್ರಾಣ ಉಳಿಸಿಕೊಳ್ಳಲು ಚೇಂಜಿಂಗ್ ರೂಮ್ನೊಳಗೆ ಓಡಿದರೂ ಬೆನ್ನಟ್ಟಿದ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಪಶ್ಚಿಮ ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ನವೆಂಬರ್ 14ರ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಸೂರಜ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.