ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ವಿದೇಶಿ ಶಕ್ತಿಗಳ ಕೈಗೊಂಬೆಯಾಗಿದ್ದು, ಅವರ ಸಹಾಯದಿಂದ ದೇಶದಲ್ಲಿ ಆಡಳಿತ ಬದಲಾವಣೆಗೆ ಪ್ರಯತ್ನಿಸುತ್ತಿದ್ದಾರ. 14) ಹೈದರಾಬಾದ್ನಲ್ಲಿ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ನಡೆದ ಭಾರತ್ ಶೃಂಗಸಭೆ 2026 ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಿಡಿಕಾರುವ ಬಿಜೆಪಿ, ಜಾರ್ಜ್ ಸೊರೊಸ್ ಬೆಂಬಲಿತ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳಿಗೆ ಮತ್ತು ಭಾರತ ವಿರೋಧಿ ಹೇಳಿಕೆಗಳನ್ನು ನೀಡಿದವರಿಗೆ ವೇದಿಕೆಯನ್ನು ಒದಗಿಸಲಾಗಿದೆ ಎಂದು ಆರೋಪಿಸಿದೆ.ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ರಾಹುಲ್ ಗಾಂಧಿ ವಿದೇಶಿ ಶಕ್ತಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮತ್ತು ವಿದೇಶಿ ಸಹಾಯದಿಂದ ಮೋದಿ ಸರ್ಕಾರವನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.