ಕೆಎಎಸ್ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಹೊಸ ಇ ಆಯ್ಕೆ, ಇಎನ್ಟಿ ವೈದ್ಯರ ನಿಯೋಜನೆ, ಜಾಮ್ರ್ಗಳ ಪರಿಶೀಲನೆ, ಸಿಸಿಟಿವಿ ಕಣ್ಗಾವಲು ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪಾರದರ್ಶಕ ಪರೀಕ್ಷೆಗೆ ಸರ್ಕಾರ ಬದ್ಧವಾಗಿದೆ. ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುತ್ತಿರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ಬಾರಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂದೆ ನಡೆದ ಪರೀಕ್ಷೆಗಳಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖುದ್ದಾಗಿ ಹಸ್ತಕ್ಷೇಪ ಮಾಡಿ, ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳೊಂದಿಗೆ ಸಭೆ ನಡೆಸಿ, ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.