ಇದೇ ಮೊದಲ ಬಾರಿಗೆ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯ ಕಡೆಯಿಂದ ಹಾರರ್ ಸಿನಿಮಾ ಘೋಷಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ನಟಿಸಲಿರುವ ವರುಣ್ ಧವನ್ ಅವರಿಗೂ ಇದು ಮೊದಲ ಹಾರರ್ ಚಿತ್ರ. ಆ ಕಾರಣದಿಂದ ಸಿನಿಪ್ರಿಯರಿಗೆ ನಿರೀಕ್ಷೆ ಹೆಚ್ಚಿದೆ. ಸಿನಿಮಾದ ಶೀರ್ಷಿಕೆ ಏನು ಎಂಬುದನ್ನು ಸದ್ಯಕ್ಕೆ ಗೌಪ್ಯವಾಗಿ ಇರಿಸಲಾಗಿದೆ. ಬಾಲಿವುಡ್ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಯಶ್ ರಾಜ್ ಫಿಲ್ಮ್ಸ್’ ಇದೀಗ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ತನ್ನ ಬ್ಯಾನರ್ ಅಡಿಯಲ್ಲಿ ಇದೇ ಮೊದಲ ಬಾರಿಗೆ ಹಾರರ್ ಸಿನಿಮಾವನ್ನು ನಿರ್ಮಿಸಲು ಸಜ್ಜಾಗಿದೆ.